
ಉಡುಪಿ: ಯುವ ಪೀಳಿಗೆಗೆ ಧಾರ್ಮಿಕ ಶಿಕ್ಷಣದ ಅವಶ್ಯಕತೆ ಇದೆ. ಜೀವನ ಪದ್ದತಿಯಲ್ಲಿ ಆಧುನಿಕತೆ ಅತಿಯಾಗಿ ಅಳವಡಿಸಿಕೊಂಡ ಪರಿಣಾಮವಾಗಿ ಸಂಸ್ಕೃತಿಯನ್ನು ಮರೆಯುತ್ತಿರುವುದು ದುರಂತ ಎಂದು ಕೇಮಾರು ಸಾಂದೀಪನಿ ಮಠದ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಸಂತೆಕಟ್ಟೆಯ ಗೋಪಾಲಪುರದ ಶೀರೂರು ಮಠದ ವಠಾರದಲ್ಲಿ ಶನಿವಾರ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಂಕರ್ ಶೆಟ್ಟಿ ಪುತ್ತೂರು, ವಿನೋದ್ ಕುಮಾರ್, ಹಿಂದೂ ಸಂಗಮ ಉಡುಪಿ ನಗರ ಸಂಯೋಜಕ ಮುರುಳಿ ಪೆರಂಪಳ್ಳಿ ಉಪಸ್ಥಿತರಿದ್ದರು.
ಸುಜಿತ್ ಶೆಟ್ಟಿ ಕೆಳಾರ್ಕಳಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಮಲೆಬೆಟ್ಟು ದಿಕ್ಸೂಚಿ ಭಾಷಣ ಮಾಡಿದರು. ಕಿಶೋರ್ ಸ್ವಾಗತಿಸಿದರು. ಸಂದೇಶ್ ಶೆಟ್ಟಿ ವಂದಿಸಿದರು. ಅಕ್ಷಯ್ ಹೆಗ್ಡೆ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಮೇಘನ ಮತ್ತು ಮಂಜರಿ ಚಂದ್ರ ಅವರ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.