ADVERTISEMENT

ಋತು ಚಕ್ರ ಶುಚಿತ್ವ: ಕಿರುಚಿತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 9:13 IST
Last Updated 13 ಫೆಬ್ರುವರಿ 2020, 9:13 IST
ಜಿಲ್ಲಾ ಪಂಚಾಯತ್‍ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮಂಗಳವಾರ ‘ಋತುಚಕ್ರದ ಶುಚಿತ್ವ ನಿರ್ವಹಣೆ’ ಕುರಿತ ಕಿರುಚಿತ್ರ ಬಿಡುಗಡೆಗೊಳಿಸಿದರು.
ಜಿಲ್ಲಾ ಪಂಚಾಯತ್‍ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮಂಗಳವಾರ ‘ಋತುಚಕ್ರದ ಶುಚಿತ್ವ ನಿರ್ವಹಣೆ’ ಕುರಿತ ಕಿರುಚಿತ್ರ ಬಿಡುಗಡೆಗೊಳಿಸಿದರು.   

ಉಡುಪಿ: ಜಿಲ್ಲಾ ಪಂಚಾಯತ್‍ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮಂಗಳವಾರ ‘ಋತುಚಕ್ರದ ಶುಚಿತ್ವ ನಿರ್ವಹಣೆ’ ಕುರಿತ ಕಿರುಚಿತ್ರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಋತುಚಕ್ರದ ಶುಚಿತ್ವ ನಿರ್ವಹಣೆ ಅರಿವು ಮೂಡಿಸುವುದು ಪ್ರಮುಖ ಅಂಶವಾಗಿರುವ ಹಿನ್ನೆಲೆಯಲ್ಲಿ ಕಿರುಚಿತ್ರ ತಯಾರಿಸಲಾಗಿದೆ. ಋತುಚಕ್ರದ ಸಂದರ್ಭ ಶುಚಿತ್ವ ನಿರ್ವಹಣೆ ಹಾಗೂ ಬಳಸಿದ ಪ್ಯಾಡ್‍ಗಳ ಸುರಕ್ಷಿತ ವಿಲೇವಾರಿ ಬಗ್ಗೆ ಅರಿವು ಮೂಡಿಸಲು ಕಿರುಚಿತ್ರ ಸಿದ್ಧಪಡಿಸಲಾಗಿದೆ.

ರಾಜ್ಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿದ್ಧಪಡಿಸಿರುವ ಕಿರುಚಿತ್ರದ ಸಿಡಿಯನ್ನು ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ನೀಡಲಾಗುವುದು ಎಂದರು.

ADVERTISEMENT

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.