ADVERTISEMENT

ಉಡುಪಿಯಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ 13ರಂದು

500 ವಿದ್ಯಾರ್ಥಿ ಕಲಾವಿದರು ಭಾಗಿ: ಡಾ.ಎಂ.ಮೋಹನ ಆಳ್ವ ವಿವರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 7:29 IST
Last Updated 6 ಡಿಸೆಂಬರ್ 2025, 7:29 IST
ಪೂರ್ವಭಾವಿ ಸಭೆಯಲ್ಲಿ ಡಾ.ಎಂ.ಮೋಹನ ಆಳ್ವ ಮಾತನಾಡಿದರು
ಪೂರ್ವಭಾವಿ ಸಭೆಯಲ್ಲಿ ಡಾ.ಎಂ.ಮೋಹನ ಆಳ್ವ ಮಾತನಾಡಿದರು   

ಉಡುಪಿ: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಇದೇ 13ರಂದು ಸಂಜೆ 5.45 ರಿಂದ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಪ್ರದೇಶದಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ ನಡೆಯಲಿದ್ದು, 500 ವಿದ್ಯಾರ್ಥಿ ಕಲಾವಿದರು ಪಾಲ್ಗೊಳ್ಳುವರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.

ಉಡುಪಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಯೋಗದೀಪಿಕ, ಶಾಸ್ತ್ರೀಯ ನೃತ್ಯ–ಅಷ್ಟಲಕ್ಷ್ಮೀ, ಬಡಗುತಿಟ್ಟಿನ ಯಕ್ಷಗಾನ, ಗುಜರಾತಿನ ದಾಂಡಿಯಾ ನೃತ್ಯ, ಮಣಿಪುರಿ ಸ್ಟಿಕ್‌ ಡ್ಯಾನ್ಸ್‌, ಮಲ್ಲಕಂಬ, ಡೊಳ್ಳು ಕುಣಿತ ಇತ್ಯಾದಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಲಿದ್ದಾರೆ. ಮನೋರಂಜನೆಯ ಜೊತೆಗೆ ಸಂಸ್ಕೃತಿಯನ್ನೂ ಬಿಂಬಿಸುವ ಕಾರ್ಯಕ್ರಮದಲ್ಲಿ 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. 

ಶಾಸಕ ಯಶ್‌ಪಾಲ್‌ ಸುವರ್ಣ, ಜಯಕರ ಶೆಟ್ಟಿ ಇಂದ್ರಾಳಿ, ಸುಪ್ರಸಾದ್‌ ಶೆಟ್ಟಿ, ಕಿರಣ್‌ ಆಚಾರ್ಯ, ಪ್ರಸಾದ್‌ರಾಜ್‌ ಕಾಂಚನ್‌, ಕೆ.ವಿ. ರಮಣ, ಪ್ರಭಾಕರ ಪೂಜಾರಿ, ನೀಲಾವರ ಸುರೇಂದ್ರ ಅಡಿಗ, ಎಂ.ಎಲ್‌ ಸಾಮಗ, ಗಂಗಾಧರ ರಾವ್‌ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.