ADVERTISEMENT

ಅನರ್ಹರಿಂದ ಜನಾದೇಶ, ಪ್ರಜಾಪ್ರಭುತ್ವಕ್ಕೆ ದ್ರೋಹ: ಉಗ್ರಪ್ಪ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 14:54 IST
Last Updated 6 ಫೆಬ್ರುವರಿ 2020, 14:54 IST
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ   

ಉಡುಪಿ: ಜನಾದೇಶಕ್ಕೆ, ಪ್ರಜಾಪ್ರಭುತ್ವಕ್ಕೆ, ಪಕ್ಷಕ್ಕೆ ದ್ರೋಹ ಮಾಡಿದ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ದಿನ ರಾಜ್ಯದ ಇತಿಹಾಸದಲ್ಲಿ ಕರಾಳ ದಿನವಾಗಲಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌.ಉಗ್ರಪ್ಪ ಟೀಕಿಸಿದರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಣದ ಹೊಳೆ ಹರಿಸಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದೆ. ಇದುಪ್ರಜಾಪ್ರಭುತ್ವಕ್ಕೆ ಮಾರಕ. ಮಂತ್ರಿಗಳಾದವರು ಮುಂದಾದರೂ ಪಕ್ಷಕ್ಕೆ ನಿಷ್ಟರಾಗಿರಲಿ ಎಂದು ಉಗ್ರಪ್ಪ ಕಿವಿಮಾತು ಹೇಳಿದರು.

ಕಾಂಗ್ರೆಸ್‌ ಸೋತಿದೆ, ಆದರೆ ಪಕ್ಷ ನಿರ್ನಾಮವಾಗಿಲ್ಲ. ಬಿಜೆಪಿ ದಾಸ್ಯ ಪ್ರವೃತ್ತಿ ಬಿಟ್ಟು, ರಾಜ್ಯದ ಪ್ರವಾಹ ಪೀಡಿತರ ಸಮಸ್ಯೆಗೆ ಸ್ಪಂದಿಸಲಿ. ಕೇಂದ್ರದಿಂದ ಹೆಚ್ಚಿನ ಅನುದಾನ ತರಲಿ ಎಂದು ಒತ್ತಾಯಿಸಿದರು.

ADVERTISEMENT

ಸಂಸದ ಅನಂತ ಕುಮಾರ್ ಮಾನಸಿಕ‌ ಸ್ಥಿಮಿತತೆ ಕಳೆದುಕೊಂಡಿದ್ದಾರೆ.ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಅವರನ್ನು ಸಂಸದ ಸ್ಥಾನದಿಂದ ವಜಾಮಾಡಲಿ, ಗಾಂಧೀಜಿ ವಿರುದ್ಧದ ಟೀಕೆಅನಂತ್ ಕುಮಾರ್ ಹೆಗಡೆಯೊಬ್ಬರ ಧ್ವನಿ ಅಲ್ಲ,ಇದು ಬಿಜೆಪಿಯ ಮೈಂಡ್ ಸೆಟ್ ಎಂದು ಉಗ್ರಪ್ಪ ಟೀಕಿಸಿದರು.

ದೇಶದ ಪರಂಪರೆ, ಗಾಂಧೀಜಿ, ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಕಿಂಚಿತ್ತಾದರೂ ಗೌರವ ಇದ್ದರೆ ಹೆಗಡೆ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಿ. ಸಂವಿಧಾನ ವಿರೋಧಿ ನಡೆ ವಿರುದ್ಧ ಪ್ರಕರಣ ದಾಖಲಿಸಲಿ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.