
ಪ್ರಜಾವಾಣಿ ವಾರ್ತೆ
ಕೋಟ(ಬ್ರಹ್ಮಾವರ): ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಗೀತಾನಂದ ಫೌಂಡೇಷನ್, ಕೋಟ ರೈತ ಧ್ವನಿ ಸಂಘ, ಕಾರ್ಕಡ ಗೆಳೆಯರ ಬಳಗ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್, ಸಾಲಿಗ್ರಾಮ ವಿಪ್ರ ಮಹಿಳಾ ಬಳಗದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಸಮಾರಂಭದಲ್ಲಿ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ಸಾಲಿಗ್ರಾಮದ ಉಮೇಶ ಕಾರ್ಕಡ ಅವರನ್ನು ಸನ್ಮಾನಿಸಲಾಗುವುದು.
ಪ್ರತಿ ತಿಂಗಳು ಕೋಟ ಹೋಬಳಿಯ ವಿವಿಧ ಭಾಗಗಳ ಸಾಧಕ ಕೃಷಿಕರನ್ನು ಗುರುತಿಸುವ ಸರಣಿ ‘ರೈತರೆಡೆಗೆ ನಮ್ಮ ನಡಿಗೆ’ ಮಾಲಿಕೆಗೆ ಇದೀಗ 33ರ ಸಂಭ್ರಮದಲ್ಲಿದ್ದು, ಫೆ. 27ರಂದು ಸಂಜೆ 4.30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.