ADVERTISEMENT

ಉಡುಪಿ: ರೈತ ಮಹಿಳೆಯರೊಂದಿಗೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತ ಸಚಿವೆ ಶೋಭಾ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 6:56 IST
Last Updated 19 ಆಗಸ್ಟ್ 2021, 6:56 IST
ಸಚಿವೆ ಶೋಭಾ ಕರಂದ್ಲಾಜೆ ಅವರು ಕಡೇಕಾರು ಗ್ರಾಮದಲ್ಲಿ ರೈತ ಮಹಿಳೆಯರ ಜತೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತರು.
ಸಚಿವೆ ಶೋಭಾ ಕರಂದ್ಲಾಜೆ ಅವರು ಕಡೇಕಾರು ಗ್ರಾಮದಲ್ಲಿ ರೈತ ಮಹಿಳೆಯರ ಜತೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತರು.   

ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಕಡೇಕಾರು ಗ್ರಾಮದಲ್ಲಿ ರೈತ ಮಹಿಳೆಯರ ಜತೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತರು.

ಕೇದಾರೋತ್ಥಾನ ಟ್ರಸ್ಟ್‌ನಿಂದ ಉಡುಪಿ ತಾಲ್ಲೂಕಿನಾದ್ಯಂತ ಹಡಿಲುಭೂಮಿ ಕೃಷಿ ಆಂದೋಲನ ನಡೆಸಲಾಗುತ್ತಿದ್ದು 1,500 ಎಕರೆಗೂ ಹೆಚ್ಚು ಹಡಿಲುಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ.

ಕಳೆ ಕೀಳುವ ಕಾರ್ಯದಲ್ಲಿ ಹಲವು ಕಾಲೇಜಿನ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿನೀಡಿರುವ ಸಚಿವೆ ಶೋಭಾ ಕರಂದ್ಲಾಜೆ ಬೆಳಿಗ್ಗೆ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಬಳಿಕ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಂದ ಫಲ ಮಂತ್ರಾಕ್ಷತೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.