ಉಡುಪಿಯ ನಿಟ್ಟೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಉಪ ಲೋಕಾಯುಕ್ತರು ಭೇಟಿ ನೀಡಿ ಪರಿಶೀಲಿಸಿದರು
ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಗರದ ನಿಟ್ಟೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ಮಲ್ಪೆ ಬಂದರು ಸಮೀಪ ಪ್ರದೇಶಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಿಟ್ಟೂರು ನೀರು ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ನೀರು ಶುದ್ದೀಕರಣಕ್ಕೆ ಪ್ರತಿ ತಿಂಗಳು ₹3 ಲಕ್ಷ ಖರ್ಚಾದರೂ ತ್ಯಾಜ್ಯ ನೀರು ಸಮರ್ಪಕವಾಗಿ ಶುದ್ಧೀಕರಣವಾಗುತ್ತಿಲ್ಲ. ಗಬ್ಬು ವಾಸನೆ ಹರಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಳಚೆ ನೀರು ಆರು ಹಂತಗಳಲ್ಲಿ ಶುದ್ಧೀಕರಣಗೊಂಡಿದೆ ಎಂದು ಹೇಳಲಾಗುತ್ತಿದ್ದರೂ ಘಟಕದಿಂದ ಕಪ್ಪುಬಣ್ಣದ ನೀರು ಹೊರಬರುತ್ತಿರುವುದು ಗಮನಿಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲು ಸೂಚಿಸಿದರು.
ಬಳಿಕ ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಹೊರಗುತ್ತಿಗೆಯಲ್ಲಿ ನೇಮಕಗೊಂಡಿದ್ದ ಮಹಿಳಾ ಸ್ವಚ್ಛತಾ ಕಾರ್ಮಿಕರು ತಮಗೆ ಇಎಸ್ಐ ಸೌಲಭ್ಯ ನೀಡುತಿಲ್ಲ ಎಂದು ದೂರಿದರು.
ಕೂಡಲೇ ಇಎಸ್ ಐ ಕಾರ್ಡ್ ನೀಡುವಂತೆ ಉಪ ಲೋಕಾಯುಕ್ತರು ಸಂಬಂಧಪಟ್ಟವರಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.