
ಬ್ರಹ್ಮಾವರ: ವಡ್ಡರ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೊನಿ ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ, ನೇತ್ರ ತಪಾಸಣೆ ಶಿಬಿರ, ಆಯುಷ್ಮಾನ್ ಆರೋಗ್ಯ ಕಾರ್ಡ್, ವಯೋವಂದನ ಕಾರ್ಡ್ ಸೃಜನೆ ಕಾರ್ಯಕ್ರಮ ಬುಧವಾರ ನಡೆಯಿತು.
ಸಾಹೇಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ ಬಿ. ಮಾತನಾಡಿ, ಕಣ್ಣು ಸೇರಿದಂತೆ ದೇಹದ ವಿವಿಧ ಭಾಗಗಳ ಆರೋಗ್ಯ ಕಾಯ್ದುಕೊಳ್ಳುವುದು ಬಹುಮುಖ್ಯ ಎಂದರು. ಆಹಾರ ಕ್ರಮ, ಅತಿ ಹೆಚ್ಚು ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಶ್ಚಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ವಡ್ಡರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ ಕಾಂಚನ್ ಚಾಲನೆ ನೀಡಿದರು. ಪಿಡಿಒ ಜಯರಾಮ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಕೆ.ಪಿ. ಕೋಟಿ ಪೂಜಾರಿ, ಹರೀಶ ಶೆಟ್ಟಿ, ಪಾರ್ವತಿ ದೇವಾಡಿಗ, ಕೋಟ ಸಮುದಾಯ ಆರೋಗ್ಯ ಕೇಂದ್ರ ಎನ್‌ಸಿಡಿ ಘಟಕದ ವೈದ್ಯಾಧಿಕಾರಿ ಡಾ.ಯಶಶ್ರೀ, ಪ್ರಸಾದ್ ನೇತ್ರಾಲಯದ ಡಾ.ನಿರಂಜನ್, ಸಮುದಾಯ ಆರೋಗ್ಯ ಅಧಿಕಾರಿ ಮಮತಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋದಾ, ಆಶಾ ಕಾರ್ಯಕರ್ತೆಯರಾದ ಗುಲಾಬಿ, ಭವಾನಿ, ಅಂಗನವಾಡಿ ಕಾರ್ಯಕರ್ತೆ ಅನಿತಾ, ಸಹಾಯಕಿ ಸೌಲತ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ಕಾರಿ ನೇತ್ರ ಘಟಕ, ವಡ್ಡರ್ಸೆ ಗ್ರಾಮ ಪಂಚಾಯಿತಿ, ಕೋಟ ಸಮುದಾಯ ಆರೋಗ್ಯ ಕೇಂದ್ರ ಎನ್‌ಸಿಡಿ ಘಟಕ, ಉಡುಪಿ ಪ್ರಸಾದ ನೇತ್ರಾಲಯ, ಗ್ರಾಮ ಒನ್ ವಡ್ಡರ್ಸೆ, ಸಾಹೇಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಅಚ್ಲಾಡಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಾರ್ಯಕ್ರಮ ಆಯೋಜಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.