ಹೆಬ್ರಿ: ಇಲ್ಲಿನ ಪಾಂಡುರಂಗ ರಮಣನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಮೃತಭಾರತಿ ಮಾತೃ ಮಂಡಳಿಯಿಂದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಅನ್ನಪೂರ್ಣ ಸಭಾಂಗಣದಲ್ಲಿ ಆಚರಿಸಲಾಯಿತು.
ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆ ನೆರವೇರಿಸಿದರು. ಮಾತೃ ಮಂಡಳಿಯ ಅಧ್ಯಕ್ಷೆ ವೀಣಾ ಭಟ್ ವರಂಗ, ಕೋಶಾಧಿಕಾರಿ ಛಾಯಾ ಸೋಮಯಾಜಿ, ಕಾರ್ಯದರ್ಶಿ ಸುಪ್ರೀತಾ ಶೆಟ್ಟಿ, ಮಾತೃಮಂಡಳಿ ಸದಸ್ಯರು, ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರವಿರಾವ್ , ಕಾರ್ಯದರ್ಶಿ ಗುರುದಾಸ ಶೆಣೈ, ವಿಷ್ಣುಮೂರ್ತಿ ನಾಯಕ್, ಸಂಸ್ಥೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ, ಅನಿತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.