ಉಡುಪಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ಶಾಸಕ ಯಶ್‌ಪಾಲ್ ಸುವರ್ಣ ಅವರು ದೆಹಲಿಯಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಎನ್‌ಡಿಎ ಮೈತ್ರಿಕೂಟ ದೇಶದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಗೌರವ ಸಲ್ಲಿಸಿದೆ ಎಂದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಉತ್ತರ ಪ್ರದೇಶದ ಸಚಿವ ನರೇಂದ್ರ ಕುಮಾರ್ ಕಶ್ಯಪ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.