
ಹೆಬ್ರಿ: ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಡವರಿಗೆ ಅನ್ಯಾಯ ಮಾಡಿ ಜನವಿರೋಧಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೂರಿದರು.
ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆರ್ಡೂರು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರದ ಅನ್ಯಾಯ ಮಾಡುತ್ತಿದೆ, ಗ್ರಾಮ ಪಂಚಾಯತಿ ಹಾಗೂ ಕಾರ್ಮಿಕರ ಹಕ್ಕು ಕಸಿದು
ಗ್ರಾಮ ಪಂಚಾಯಿತಿಗಳನ್ನು ನಿಷ್ಕ್ರೀಯ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತ ರೈ, ಪೆರ್ಡೂರು ಕಾಂಗ್ರೆಸ್ ಅಧ್ಯಕ್ಷ ದಿನೇಶ ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಸಾಲಿಯಾನ್, ದಯಾನಂದ ಶೆಟ್ಟಿ, ಶೋಭಾ ಗಾಂಸ್ಸ್, ಲಕ್ಷ್ಮಿ, ಉದಯ ಕುಲಾಲ್, ರಾಘವೇಂದ್ರ, ಗಾಯತ್ರಿ, ಜಯಶ್ರೀ ಕುಲಾಲ್, ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ರಾಮದಾಸ ನಾಯ್ಕ್, ನಬೀಲ್ ಉದ್ಯಾವರ, ರಾಜು ಸುವರ್ಣ, ಕಾರ್ತಿಕ್ ಆಚಾರ್ಯ, ಶಿವು ಕುಮಾರ್, ಮುಖಂಡ ಶಾಂತಾರಾಮ ಸೂಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.