ADVERTISEMENT

ವಿಶ್ವಕರ್ಮ ಸಮಾಜ ಇಬ್ಭಾಗಿಸಲು ಸಚಿವ ಕೋಟ ಯತ್ನ: ಆರೋಪ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 13:45 IST
Last Updated 27 ಜೂನ್ 2022, 13:45 IST
ವಿಶ್ವಕರ್ಮ ಸಮಾಜದ ಮುಖಂಡ ನೇರಂಬಳ್ಳಿ ರಮೇಶ್ ಆಚಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿಶ್ವಕರ್ಮ ಸಮಾಜದ ಮುಖಂಡ ನೇರಂಬಳ್ಳಿ ರಮೇಶ್ ಆಚಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ಉಡುಪಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜವನ್ನು ಇಬ್ಭಾಗ ಮಾಡಲು ಯತ್ನಿಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ರಕ್ಷಣೆಗೆ ನಿಂತಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೇರಂಬಳ್ಳಿ ರಮೇಶ್ ಆಚಾರ್ ದೂರಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ನಾಯಕತ್ವದಲ್ಲಿ ವಿಶ್ವಕರ್ಮ ಸಮಾಜದ ಸಂಘಟನೆ ಹಾಗೂ ಅಭಿವೃದ್ಧಿ ಹಾದಿಯಲ್ಲಿದೆ. ಕೆ.ಪಿ.ನಂಜುಂಡಿ ಅವರಿಗೆ ಆಹ್ವಾನ ನೀಡದೆ ಈಚೆಗೆ ಎಸಿಬಿ ವಿಚಾರಣೆಗೆ ಗುರಿಯಾಗಿರುವ ವಿಶ್ವಕರ್ಮ ನಿಗಮದ ಅಧ್ಯಕ್ಷ ಬಾಬು ಪತ್ತಾರ ಅವರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಭೆ ನಡೆಸಿರುವುದು ಸಮಾಜಕ್ಕೆ ಮುಜುಗರ ತಂದಿದೆ.

ವಿಶ್ವಕರ್ಮ ಸಮಾಜದ ಇತರ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡಿರುವುದು ಸರಿಯಲ್ಲ. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ರಮೇಶ್ ಆಚಾರ್ಯ ಒತ್ತಾಯಿಸಿದ್ದಾರೆ.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗಂಗಾಧರ್ ಆಚಾರ್ಯ, ರುಕ್ಮಿಣಿ ಆಚಾರ್, ರೋಷನ್ ಆಚಾರ್, ನಾರಾಯಣ್ ಆಚಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.