
ಕಾರ್ಕಳ: ಇಲ್ಲಿನ ವಿಶ್ವಕರ್ಮ ಸಹಕಾರ ಬ್ಯಾಂಕ್ ಸ್ವರ್ಣ ಜಯಂತಿ ಪ್ರಯುಕ್ತ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ 19ನೇ ಸ್ವಚ್ಚ ವಿಚಾರ್ ಸಂವಾದ ಈಚೆಗೆ ಆಯೋಜಿಸಲಾಯಿತು.
ಸಾಮಾಜಿಕ ಕಾರ್ಯಕರ್ತ ಉಮಾನಾಥ ಕೋಟೆಕಾರ್ ಮಾತನಾಡಿದರು. ವಿಶ್ವಕರ್ಮ ಬ್ಯಾಂಕ್ ಅಧ್ಯಕ್ಷ ಎಸ್.ಆರ್ ಹರೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಪೆಲಿಕ್ಸ್ ವಾಸ್, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್, ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಜೊತೆ ಮೊಕ್ತೇಸರ ಪಿ.ರವಿ ಆಚಾರ್ಯ, ವ್ಯವಸ್ಥಾಪಕ ದಿನೇಶ್ ಆಚಾರ್ಯ, ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕ ವಸಂತ ಎಂ, ವೈದ್ಯಾಧಿಕಾರಿ ಡಾ.ಮಾನಸ ಮುಗೇರಾಯ ಇದ್ದರು. ನಿತಿನ್ ಕಣ್ಣೂರ್ ಸ್ವಾಗತಿಸಿದರು. ಸಿಬ್ಬಂದಿ ಕಿರಣ್ ಆಚಾರ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.