ADVERTISEMENT

Photos | ಉಡುಪಿಯ ಕೃಷ್ಣಮಠದಲ್ಲಿ ನೆರವೇರಿದ ವಿಟ್ಲಪಿಂಡಿ ಉತ್ಸವ

ಕೋವಿಡ್‌ನಿಂದಾಗಿ ಸೀಮಿತ ಸಂಖ್ಯೆಯ ಭಕ್ತರ ಉಪಸ್ಥಿತಿಯಲ್ಲಿ ಮಂಗಳವಾರ ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ ನೆರವೇರಿತು. ರಥಬೀದಿಯಲ್ಲಿ ನಡೆದ ಕೃಷ್ಣನ ಲೀಲೋತ್ಸವಗಳನ್ನು ಭಕ್ತರು ಕಣ್ತುಂಬಿಕೊಂಡರು.ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಸುವರ್ಣ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು, ಮಠದ ಸಿಬ್ಬಂದಿ ರಥವನ್ನು ಎಳೆದು ಕೃಷ್ಣನ ಸ್ಮರಣೆ ಮಾಡಿದರು. ಕನಕ ನವರತ್ನ ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೇಶ್ವರನ ಮೂರ್ತಿಗಳನ್ನು ಇಡಲಾಗಿತ್ತು. ಎರಡೂ ರಥಗಳು ರಥಬೀದಿಯ ಸುತ್ತ ಮೆರವಣಿಗೆಯಲ್ಲಿ ಸಾಗಿದವು.

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 14:17 IST
Last Updated 31 ಆಗಸ್ಟ್ 2021, 14:17 IST
ಸೀಮಿತ ಸಂಖ್ಯೆಯ ಭಕ್ತರ ಉಪಸ್ಥಿತಿಯಲ್ಲಿ ಮಂಗಳವಾರ ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ ನೆರವೇರಿತು
ಸೀಮಿತ ಸಂಖ್ಯೆಯ ಭಕ್ತರ ಉಪಸ್ಥಿತಿಯಲ್ಲಿ ಮಂಗಳವಾರ ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ ನೆರವೇರಿತು   
ಉತ್ಸವದಲ್ಲಿ ವಿವಿಧ ವೇಷಗಳನ್ನು ಧರಿಸಿದ್ದವರು
ರಥಬೀದಿಯಲ್ಲಿ 14 ಗುರ್ಜಿಗಳಲ್ಲಿ ಕಟ್ಟಲಾಗಿದ್ದ ಮೊಸರಿನ ಕುಡಿಕೆಗಳನ್ನು ಗೊಲ್ಲ ವೇಷಧಾರಿಗಳು ಒಡೆದು ಸಂಭ್ರಮಿಸಿದರು.
ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ
ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವದ ವೇಳೆ ಕಂಡುಬಂದ ದೃಶ್ಯ
ವಿಟ್ಲಪಿಂಡಿ ಉತ್ಸವದಲ್ಲಿನ ಗೊಲ್ಲ ವೇಷಧಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.