ADVERTISEMENT

ಕಾರ್ಕಳ: ‘ವಿವೇಕಾನಂದರ ಚಿಂತನೆ ಸಾರ್ವಕಾಲಿಕ’

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 4:38 IST
Last Updated 26 ಜೂನ್ 2022, 4:38 IST
ಕಾರ್ಕಳ ಗಣಿತನಗರದ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ವತಿಯಿಂದ ಆಯೋಜಿಸಿದ ಮೌಲ್ಯ ಸುಧಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಉದ್ಘಾಟಿಸಿದರು
ಕಾರ್ಕಳ ಗಣಿತನಗರದ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ವತಿಯಿಂದ ಆಯೋಜಿಸಿದ ಮೌಲ್ಯ ಸುಧಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಉದ್ಘಾಟಿಸಿದರು   

ಕಾರ್ಕಳ: ಇಡೀ ವಿಶ್ವವೇ ಭಾರತದ ಕಡೆ ತಿರುಗುವಂತೆ ಮಾಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಅವರು ಮನುಕುಲಕ್ಕೆ ನೀಡಿದ ಸಂದೇಶ ಸಾರ್ವಕಾಲಿಕವಾದುದು ಎಂದು ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.

ತಾಲ್ಲೂಕಿನ ಕುಕ್ಕುಂದೂರು ಗಣಿತ ನಗರದ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಮೌಲ್ಯ ಸುಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರಪಿತ ಗಾಂಧೀಜಿ ಕೂಡಾ ಸ್ವಾಮಿ ವಿವೇಕಾನಂದರಿಂದ ಪ್ರಭಾವಿತರಾಗಿದ್ದರು. ಅಲ್ಲದೇ ಅವರ ಪುಸ್ತಕಗಳನ್ನು ಓದಿ ತನ್ನ ದೇಶಪ್ರೇಮವು ಇಮ್ಮಡಿಗೊಂಡಿತು ಎಂದು ಹೇಳಿಕೊಂಡಿದ್ದರು. ಮುಂದೆ ಗಾಂಧೀ ವಿಶ್ವಮಟ್ಟದ ನಾಯಕನಾಗಿ ಬೆಳೆದುದರ ಹಿಂದೆ ವಿವೇಕಾನಂದರ ಜೀವನಾದರ್ಶಗಳು ಪ್ರಭಾವ ಬೀರಿವೆ ಎಂದರು.

ADVERTISEMENT

ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಕಮಲಾಕ್ಷ ನಾಯಕ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು. ಇದ್ದರು. ಉಪನ್ಯಾಸಕ ಸಂತೋಷ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.