ADVERTISEMENT

ರಕ್ತದಾನದ ಮಹತ್ಕಾರ್ಯದಲ್ಲಿ ಕೈಜೋಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 6:28 IST
Last Updated 11 ಅಕ್ಟೋಬರ್ 2025, 6:28 IST
ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು
ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು   

ಉಡುಪಿ: ಒಬ್ಬ ವ್ಯಕ್ತಿಯು ರಕ್ತದಾನ ಮಾಡುವುದರಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಪ್ರಜ್ಞ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತ ಪ್ರಕರಣಗಳು ಸಂಭವಿಸುತ್ತವೆ. ಅಪಘಾತ ಸಂದರ್ಭಗಳಲ್ಲಿ ರಕ್ತಸ್ರಾವದಿಂದಾಗಿ ಸಾವು-ನೋವುಗಳಾಗುತ್ತವೆ. ಇಂತಹ ತುರ್ತು ಸಮಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಿದ್ದು, ಯುವಕರು ಅವರಿಂದ ಸ್ಪೂರ್ತಿ ಪಡೆದು ಸ್ವಯಂ ಪ್ರೇರಿತ ರಕ್ತದಾನ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು.

ADVERTISEMENT

ಈ ಸಂದರ್ಭದಲ್ಲಿ 50ಕ್ಕಿಂತಲೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರಾಮು ಎಲ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ, ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ನಿರ್ದೇಶಕ ಡಾ.ಪಿ.ಎಸ್. ಐತಾಳ್, ಕುಂದಾಪುರ ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ, ಉಡುಪಿ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರ್, ಡಾ. ಚಿದಾನಂದ ಸಂಜು ಎಸ್.ವಿ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.