ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ.
ಮೂರು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಮೀನು ಕದ್ದಿರುವುದಾಗಿ ಆರೋಪಿಸಿ ಮಹಿಳೆಗೆ ಇನ್ನೊಬ್ಬ ಮಹಿಳೆ ನಿಂದಿಸಿ, ಕಪಾಳಕ್ಕೆ ಹೊಡೆದಿರುವುದು ಹಾಗೂ ಬಳಿಕ ಮರಕ್ಕೆ ಕಟ್ಟಿಹಾಕಿ ಥಳಿಸಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.
ಈ ಕುರಿತು ಮಲ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.