
ಪಡುಬಿದ್ರಿ: ಕಾಂಕ್ರೀಟ್ ಕೆಲಸಕ್ಕೆ ಹೋಗುತ್ತಿದ್ದ ಪಿಕ್‌ಅಪ್ ವಾಹನದ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುವಾರ ರಾಷ್ಟ್ರೀಯ ಹೆದ್ದಾರಿ–66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ನಡೆದಿದೆ.
ಪಾರ್ವತಿ ಕೊಂಡಕುಳಿ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡ 6 ಮಂದಿಯನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಲ್ಕಿಯಿಂದ ಉಡುಪಿ ಕಡೆಗೆ ಕಾಂಕ್ರಿಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರ ಹೊತ್ತು ಸಾಗುತ್ತಿದ್ದ ವಾಹನದಲ್ಲಿ ಪುರುಷ ಮತ್ತು ಮಹಿಳಾ ಕಾರ್ಮಿಕರು ಇದ್ದರು. ಈ ವೇಳೆ ಟಯರ್ ಸ್ಪೋಟಗೊಂಡಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದಿದ್ದಿ. ಮುಗುಚಿ ಬಿದ್ದ ಟೆಂಟೊದಡಿ ಸಿಲುಕಿದ್ದ ಎಲ್ಲರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಗಿದೆ. ಮಹಿಳೆ ಯಂತ್ರ ಅಡಿಗೆ ಸಿಲುಕಿದ್ದರಿಂದ ಅವರನ್ನು ಹೊರತೆಗೆಯಲು ಸಾರ್ವಜನಿಕರು ಮತ್ತು ಟೋಲ್ ಸಿಬ್ಬಂದಿ ಹರಸಾಹಸಪಟ್ಟರು. ಮೃತ ಪಾರ್ವತಿ ಅವರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪುವಿನ ಬಳಿ ಇತ್ತೀಚೆಗೆ ನಡೆದ ಟೆಂಪೊ ದುರಂತದಲ್ಲಿ 5 ಮಂದಿ ಕಾರ್ಮಿಕರು ಧಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದೆ. ದಿನಂಪ್ರತಿ ಇದೇ ವಾಹನದಲ್ಲಿ ಕಾರ್ಮಿಕರನ್ನು ಸಾಗಿಸಲಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.