ADVERTISEMENT

ಉಡುಪಿ: 239 ಮಂದಿಗೆ ಕೋವಿಡ್‌ ಸೋಂಕು, ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 16:13 IST
Last Updated 10 ಅಕ್ಟೋಬರ್ 2020, 16:13 IST
   

ಉಡುಪಿ: ಜಿಲ್ಲೆಯಲ್ಲಿ ಶನಿವಾರ 239 ಕೋವಿಡ್‌ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಲ್ಲಿ ಉಡುಪಿಯ 113, ಕುಂದಾಪುರದ 86, ಕಾರ್ಕಳದ 36 ಹಾಗೂ ಇತರೆ ಜಿಲ್ಲೆಗಳ ನಾಲ್ವರು ಇದ್ದಾರೆ.

143 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 96 ಮಂದಿಯಲ್ಲಿ ಲಕ್ಷಣಗಳು ಇಲ್ಲ. ಕೋವಿಡ್‌ ಆಸ್ಪತ್ರೆಗಳಲ್ಲಿ 28 ಹಾಗೂ ಹೋಂ ಐಸೊಲೇಷನ್‌ನಲ್ಲಿ 211 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

65 ವರ್ಷದ ಉಡುಪಿಯ ಸೋಂಕಿತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. 224 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 17,141 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. 1,952 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 19,224 ಇವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.