
ಪ್ರಜಾವಾಣಿ ವಾರ್ತೆ
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಸಂಖ್ಯೆ 61ರಿಂದ 80ರ ಸಮಗ್ರ ಮತದಾರ ಪಟ್ಟಿಯ ಕಾರ್ಯಗಾರ ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಈಚೆಗೆ ನೆರವೇರಿತು
ಪೂರ್ಣ ಪ್ರಮಾಣದ ಕಾರ್ಯಗಾರ ಮುಗಿದ ತಕ್ಷಣ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಎ- 2 ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹೇಳಿದರು.
ಕಾರ್ಯಕ್ರಮದ ಬಗ್ಗೆ ಬಿ ಎಲ್ ಎ 01 ಸಂಚಾಲಕ ರಾಜೇಶ್ ಶೆಟ್ಟಿ ಶಿರೂರು ಮೂರ್ ಕೈ ವಿವರಿಸಿದರು.
ಪ್ರಕಾಶ್ ಪೂಜಾರಿ ಬೀಜಾಡಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.