ADVERTISEMENT

ಬೈಂದೂರು: ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 13:15 IST
Last Updated 5 ಆಗಸ್ಟ್ 2021, 13:15 IST
ಹೊಸಾಡು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಾಹಿತಿ ನೀಡಲಾಯಿತು.
ಹೊಸಾಡು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಾಹಿತಿ ನೀಡಲಾಯಿತು.   

ಬೈಂದೂರು: ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೊಸಾಡು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಬುಧವಾರ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಅವರು ಗರ್ಭಿಣಿ ಸ್ತ್ರೀಯರಿಗೆ ಮತ್ತು ಬಾಣಂತಿಯರಿಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸುವುದರ ಬಗ್ಗೆ ಹಾಗೂ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರಾಜೇಶ್ವರಿ, ಹೊಸಾಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾರ್ವತಿ, ಗ್ರಾಮ ಲೆಕ್ಕಾಧಿಕಾರಿ ಅನಿಲ್ ಮೇಟಿ, ಆರೋಗ್ಯ ಕಾರ್ಯಕರ್ತೆ ಅರ್ಪಿತಾ, ಆಶಾ ಕಾರ್ಯಕರ್ತೆಯರಾದ ಪ್ರೇಮಾ ಎಸ್, ಯಶೋದಾ, ಪ್ರೇಮಾ ಭಂಡಾರಿ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗರ್ಭಿಣಿ ಮತ್ತು ಬಾಣಂತಿ ತಾಯಂದಿರಿಗೆ ಸೊಳ್ಳೆ ಪರದೆ ನೀಡಲಾಯಿತು. ಗ್ರಾಮ ಪಂಚಾಯಿತಿ ಸಿಬ್ಬಂದಿ ಶಿವಾನಂದ ಸ್ವಾಗತಿಸಿ, ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.