ADVERTISEMENT

ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 13:33 IST
Last Updated 13 ಜುಲೈ 2021, 13:33 IST

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಆರಂಭಿಸಲಾಗುತ್ತಿದ್ದು, ಜುಲೈ 20ರಂದು ತರಗತಿಗಳು ಆರಂಭವಾಗಲಿವೆ.

4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಅವರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಪ್ರತಿ ಮಂಗಳವಾರ ಸಂಜೆ 5 ರಿಂದ 6ರವರೆಗೆ ತರಗತಿಗಳು ನಡೆಯಲಿದ್ದು, ಪ್ರತಿಷ್ಠಾನದ ಕಾರ್ಯಕ್ಕೆ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಠದಲ್ಲಿ ಸ್ಥಳಾವಕಾಶ ಒದಗಿಸಿದ್ದಾರೆ. ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ನೇರವಾಗಿ ಮಂಗಳವಾರ ತರಗತಿಗೆ ಹಾಜರಾಗಬಹುದು ಎಂದು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗೆ 9844212104 /9663424981/9845150802 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT