ADVERTISEMENT

ಯಕ್ಷ ಸಂಜೀವ ಯಕ್ಷಗಾನ ಕೇಂದ್ರ ಉದ್ಘಾಟನೆ 10ರಂದು

ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣರ ನೇತೃತ್ವದಲ್ಲಿ ಆರಂಭವಾಗಲಿರುವ ಕೇಂದ್ರ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 15:54 IST
Last Updated 7 ಅಕ್ಟೋಬರ್ 2022, 15:54 IST
ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ನೇತೃತ್ವದಲ್ಲಿ ಆರಂಭವಾಗುತ್ತಿರುವ ಉಡುಪಿಯ ಯಕ್ಷ ಸಂಜೀವ ಯಕ್ಷಗಾನ ಕೇಂದ್ರ.
ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ನೇತೃತ್ವದಲ್ಲಿ ಆರಂಭವಾಗುತ್ತಿರುವ ಉಡುಪಿಯ ಯಕ್ಷ ಸಂಜೀವ ಯಕ್ಷಗಾನ ಕೇಂದ್ರ.   

ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ನೇತೃತ್ವದಲ್ಲಿ ಆರಂಭವಾಗುತ್ತಿರುವ ಉಡುಪಿಯ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದ ಉದ್ಘಾಟನೆ ಅ.10ರಂದು ಸಂಜೆ 5 ಗಂಟೆಗೆ ಜರುಗಲಿದೆ.

ಕೋಟ ಶಿವರಾಮ ಕಾರಂತರ ಜನ್ಮದಿನದಂದು ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳು ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಉಪಸ್ಥಿತರಿರಲಿದ್ದಾರೆ.

ಯಕ್ಷಗಾನ ಕೇಂದ್ರ ಉಡುಪಿ ವಿಶ್ರಾಂತ ನಿರ್ದೇಶಕ ಪ್ರೊ.ಹೆರಂಜೆ ಕೃಷ್ಣ ಭಟ್, ಡಾ.ಭಾಸ್ಕರಾನಂದಕುಮಾರ್, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಎಂಜಿಎಂ ಕಾಲೇಜಿನಿಂದ ಬುಡ್ನಾರು ರಸ್ತೆಯಲ್ಲಿರುವ ಸಂಜೀವ ಸುವರ್ಣರ ಸ್ವಗೃಹ 'ಗುರುದಕ್ಷಿಣೆ’ಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.