
ಪ್ರಜಾವಾಣಿ ವಾರ್ತೆ
ಈಶ್ವರ ಗೌಡ
ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಅವರು ಬುಧವಾರ ರಾತ್ರಿ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಚೌಕಿಯಲ್ಲಿ ಹೃದಯಾಘಾತದಿಂದ ನಿಧನರಾದರು.
ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾದ ಆವರು, ಕುಂದಾಪುರದ ಸೌಡ ಬಳಿ ನಡೆದ ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿ ವೇಷ ಕಳಚುವ ಮುನ್ನ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.