ADVERTISEMENT

ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಸಾವು

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 5:39 IST
Last Updated 5 ಜನವರಿ 2021, 5:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬ್ರಹ್ಮಾವರ (ಉಡುಪಿ):ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಘಟನೆ ನಡೆದಿದೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧುಕೊಠಾರಿ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗಸ್ಥಳದಲ್ಲೇನೋವಿನಿಂದ ಕುಸಿದುಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ADVERTISEMENT

ಪ್ರಸ್ತುತ ಬಾರ್ಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿ ಅವರು ಬಡಗುತಿಟ್ಟಿನ ಹಿರಿಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದರು.

ಮೃತರಾದ ಸಾಧು ಕೊಠಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.