ADVERTISEMENT

ಉಡುಪಿ: ಗೋವಿಂದ ಭಟ್‌ಗೆ ಸೀತಾನದಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 3:55 IST
Last Updated 8 ಅಕ್ಟೋಬರ್ 2024, 3:55 IST
ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸೀತಾನದಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸೀತಾನದಿ ಪ್ರಶಸ್ತಿ ಪ್ರದಾನ ಮಾಡಲಾಯಿತು    

ಉಡುಪಿ: ಕಾರ್ಕಳದ ಬೈಲೂರಿನ ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ವತಿಯಿಂದ 37ನೇ ವರ್ಷದ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ  ಸೋಮವಾರ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು.

ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸೀತಾನದಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್‌.ವಿ. ಉದಯ ಕುಮಾರ್‌ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಪಿ. ಕಿಶನ್ ಹೆಗ್ಡೆ,  ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮಿನಾರಾಯಣ ಕಾರಂತ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

ADVERTISEMENT

ಸಭಾ ಕಾರ್ಯಕ್ರಮದ ನಂತರ ಇಂದ್ರಾಳಿ ಯಕ್ಷಗಾನ ಕೇಂದ್ರದ ಕಲಾವಿದರಿಂದ ವೀರ ಬಭ್ರುವಾಹನ ಯಕ್ಷಗಾನ ಪ್ರದರ್ಶನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.