
ಪ್ರಜಾವಾಣಿ ವಾರ್ತೆ
ಉಡುಪಿ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ನಿಧನರಾದರು.
ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು.
ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು.
‘ಚೆಲುವೆ ಚಿತ್ರಾವತಿ’, ‘ರತಿ ರೇಖಾ’, ‘ಶ್ರೀ ದೇವಿ ಬನಶಂಕರಿ’ ಮತ್ತು‘ ಶೂದ್ರ ತಪಸ್ವಿನಿ’ ಅವರು ಬರೆದ ಪ್ರಮುಖ ಯಕ್ಷಗಾನ ಪ್ರಸಂಗಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.