ADVERTISEMENT

ಬ್ರಹ್ಮಾವರ: ಯಕ್ಷಗಾನ ಯುವ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 13:32 IST
Last Updated 30 ಜುಲೈ 2024, 13:32 IST
<div class="paragraphs"><p>ಗುರುಪ್ರಸಾದ್ ನೀರ್ಜೆಡ್ಡು </p></div>

ಗುರುಪ್ರಸಾದ್ ನೀರ್ಜೆಡ್ಡು

   

ಬ್ರಹ್ಮಾವರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯಕ್ಷಗಾನ ಕಲಾವಿದ ಗುರುಪ್ರಸಾದ ನೀರ್ಜೆಡ್ಡು (26) ಅವರು ಮಂಗಳವಾರ ಮೃತಪಟ್ಟಿದ್ದಾರೆ.

ಜುಲೈ 27ರಂದು ಇಲಿ ಪಾಷಾಣ ಸೇವಿಸಿ, ಅಸ್ವಸ್ಥರಾಗಿದ್ದ ಅವರನ್ನು ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.

ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಅವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.

ಅವರಿಗೆ ತಾಯಿ ಹಾಗೂ ತಮ್ಮ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.