ADVERTISEMENT

ಆರು ಮುಸ್ಲಿಂ ವಿದ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆ ಸದಸ್ಯರು: ಯಶ್‌ಪಾಲ್ ಸುವರ್ಣ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 14:12 IST
Last Updated 6 ಏಪ್ರಿಲ್ 2022, 14:12 IST
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ   

ಉಡುಪಿ: ಅಲ್‌ಖೈದಾ ಸಂಘಟನೆಯ ಮುಖ್ಯಸ್ಥ ಅಲ್ ಜವಾಹಿರಿ ಹಿಜಾಬ್ ಪರವಾಗಿ ನೀಡಿರುವ ಹೇಳಿಕೆಯಿಂದ ಉಡುಪಿಯ ಆರು ಮುಸ್ಲಿಂ ವಿದ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂಬುದು ಸಾಬೀತಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.

ಬುಧವಾರ ನಿವಾಸದಲ್ಲಿ ಮಾತನಾಡಿದ ಅವರು, ಹಿಜಾಬ್ ವಿವಾದದ ಹಿಂದೆ ದೇಶದ್ರೋಹಿ ಸಂಘಟನೆಯ ಕೈವಾಡ ಇರುವ ಬಗ್ಗೆ ಶಂಕೆ ಇತ್ತು. ಇದೀಗ ಭಯೋತ್ಪಾದಕನ ಹೇಳಿಕೆಯಿಂದ ದೃಢವಾಗಿದೆ. ಹಿಜಾಬ್ ಗೊಂದಲ ಹುಟ್ಟುಹಾಕಿದ ಉಡುಪಿಯ ಆರು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ವಿರುದ್ಧ ಎನ್‌ಐಎ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್‌ಗೆ ಬಹುಮಾನ ಕೊಟ್ಟವರ ವಿರುದ್ಧವೂ ಎನ್‌ಐಎ ತನಿಖೆ ನಡೆಯಬೇಕು. ಭಯೋತ್ಪಾದನಾ ಸಂಘಟನೆಗಳ ಜತೆಗಿನ ನಂಟು ಬಹಿರಂಗವಾಗಬೇಕು ಎಂದರು.

ADVERTISEMENT

ದಿಟ್ಟ ಸಿಎಂ, ಗೃಹಸಚಿವರು ಬೇಕು:
ರಾಜ್ಯಕ್ಕೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಅವಶ್ಯಕತೆ ಇದೆ. ಅಭಿವೃದ್ಧಿ ಜತೆಗೆ ಹಿಂದುತ್ವವನ್ನು ರಕ್ಷಿಸುವ ಹಾಗೂ ಮೀನಮೇಷ ಎಣಿಸದೆ, ಮುಹೂರ್ತ–ಘಳಿಗೆ ನೋಡದೆ ನಿರ್ಧಾರ ತೆಗೆದುಕೊಳ್ಳುವ ನಾಯಕರು ಬೇಕು ಎಂದು ಯಶ್‌ಪಾಲ್‌ ಸುವರ್ಣ ಅಭಿಪ್ರಾಯಪಟ್ಟರು.

ಹಿಜಾಬ್ಹೋರಾಟಕ್ಕೆ ಸಹಕಾರ ನೀಡುತ್ತಿರುವ ಎಸ್‌ಡಿಪಿಐ, ಪಿಎಫ್‌ಐ, ಸಿಎಫ್‌ಐ ಸಂಘಟನೆಗಳನ್ನು ಬೇರುಸಹಿತ ಕಿತ್ತೊಗೆಯಬೇಕು. ಇಲ್ಲವಾದರೆ, ದೇಶ ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.