ADVERTISEMENT

‘ಮೀನುಗಾರರಿಗೆ ಪ್ಯಾಕೇಜ್ ಘೋಷಿಸಿ’

​ಪ್ರಜಾವಾಣಿ ವಾರ್ತೆ
Published 19 ಮೇ 2021, 16:28 IST
Last Updated 19 ಮೇ 2021, 16:28 IST
ಯಶ್‌ಪಾಲ್‌ ಸುವರ್ಣ
ಯಶ್‌ಪಾಲ್‌ ಸುವರ್ಣ   

ಉಡುಪಿ: ಆರ್ಥಿಕ ಸಂಕಷ್ಟದ ನಡುವೆ ಜನಸಾಮಾನ್ಯರಿಗಾಗಿ ₹ 1250 ಕೋಟಿ ವಿಶೇಷ ಪ್ಯಾಕೇಜ್ ನೀಡುವ ಜನಪರ ನಿರ್ಧಾರ ಸ್ವಾಗತಾರ್ಹ. ಕರಾವಳಿ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಮೀನುಗಾರಿಕೆ ಕ್ಷೇತ್ರ ಕೂಡಾ ಕೊರೊನಾದಿಂದ ಸಂಕಷ್ಟಕ್ಕೀಡಾಗಿದ್ದು ಮೀನುಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್‌ ಸುವರ್ಣ ತಿಳಿಸಿದ್ದಾರೆ.

ಮೀನುಗಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು ಹಾಗೂ ಮಹಿಳಾ ಮೀನುಗಾರರರಿಗೆ ಸಹಾಯಧನ, ಡೀಸೆಲ್ ಸಬ್ಸಿಡಿ ಶೀಘ್ರ ಬಿಡುಗಡೆ, ಮೀನುಗಾರಿಕೆ ಸಾಲ ಮರುಪಾವತಿ ಕಾಲಾವಕಾಶ ವಿಸ್ತರಣೆ ಮಾಡಿ, ಆರ್ಥಿಕ ಚೈತನ್ಯ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT