ಉಡುಪಿ: ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆ ನಡೆಸಿಕೊಡಲು ಲಂಚದ ಬೇಡಿಕೆ ಇಟ್ಟ ಆರೋಪದ ಮೇರೆಗೆ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನಾ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡಸಿಕೊಡಲು ತಲಾ ₹ 5 ಸಾವಿರದಂತೆ ಒಟ್ಟು ₹10 ಸಾವಿರ ಲಂಚಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಾಂತಿನಿಕೇತನ ಸೌಹಾರ್ದ ಸಹಕಾರಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರೇಂದ್ರ ಅವರು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ರೇಣುಕಾ ಅವರು ಉಡುಪಿಯಲ್ಲಿರುವ ತಮ್ಮ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮಂಜುನಾಥ್ ಶಂಕರಹಳ್ಳಿ, ಇನ್‌ಸ್ಪೆಕ್ಟರ್ ರಾಜೇಂದ್ರ ನಾಯಕ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.