ADVERTISEMENT

ಬಿಜೆಪಿಯಿಂದ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 10:49 IST
Last Updated 22 ಜೂನ್ 2022, 10:49 IST
ಬೈಂದೂರಿನ ರಾಜ ರಾಜೇಶ್ವರಿ ಸಭಾ ಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಬೈಂದೂರು ಮಂಡಲ ಸಮಿತಿಯ ಆಶ್ರಯದಲ್ಲಿ ಮಂಗಳವಾರ ಯೋಗ ದಿನಾಚರಣೆ ನಡೆಯಿತು
ಬೈಂದೂರಿನ ರಾಜ ರಾಜೇಶ್ವರಿ ಸಭಾ ಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಬೈಂದೂರು ಮಂಡಲ ಸಮಿತಿಯ ಆಶ್ರಯದಲ್ಲಿ ಮಂಗಳವಾರ ಯೋಗ ದಿನಾಚರಣೆ ನಡೆಯಿತು   

ಬೈಂದೂರು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಇಲ್ಲಿನ ರಾಜ ರಾಜೇಶ್ವರಿ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಬೈಂದೂರು ಮಂಡಲ ಸಮಿತಿಯ ಆಶ್ರಯದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಮಡಿವಾಳ,ಯುವ ಮೋರ್ಚಾ ಉಪಾಧ್ಯಕ್ಷ ಲೋಹಿತ್ ಶೆಟ್ಟಿ ಇದ್ದರು.

ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವ ಮೂಲಕ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.