ಉಡುಪಿ: ಶಿರ್ವ ಸಮೀಪದ ಕಟಪಾಡಿಯ ಪಡು ಯೇಣಗುಡ್ಡೆಯಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ.
ಸುರೇಶ್ ಎಂಬುವರ ಪುತ್ರ ಭರತ್ ಮೃತಪಟ್ಟವರು.
ಮನೆಯಲ್ಲಿದ್ದಾಗ ಸಿಡಿಲು ಬಡಿದು ಅಸ್ವಸ್ಥಗೊಂಡ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭರತ್ ಮೃತಪಟ್ಟಿದ್ದಾನೆ.
ಭಾನುವಾರ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಸಿನ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.