ADVERTISEMENT

ಅಂಕೋಲಾ: ಪೊಲೀಸ್ ಪಥ ಸಂಚಲನ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2017, 7:23 IST
Last Updated 14 ಡಿಸೆಂಬರ್ 2017, 7:23 IST
ಅಂಕೋಲಾದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು
ಅಂಕೋಲಾದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು   

ಅಂಕೋಲಾ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಇತ್ತೀಚಿಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಮತ್ತು ಕಾನೂನು ಸುವ್ಯವಸ್ಥೆ ಕುರಿತು ನಾಗರಿಕರಲ್ಲಿ ಭರವಸೆ ಮೂಡಿಸುವ ಉಪಕ್ರಮವಾಗಿ ಬುಧವಾರ ಸಂಜೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು.

ಸಿ.ಪಿ.ಐ. ಬಸಪ್ಪ ಬುರ್ಲಿ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ವೀಣಾ ಹೊನ್ನಿ ಪಥಸಂಚಲನದ ನೇತೃತ್ವ ವಹಿಸಿದ್ದರು. ಪೊಲೀಸ್ ಠಾಣೆ ಎದುರಿನ ವೃತ್ತದಿಂದ ಹೊರಟ ಪಥಸಂಚಲನವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಂಡಿಬಝಾರ, ಕಿತ್ತೂರು ಚನ್ನಮ್ಮ ರಸ್ತೆ ಮುಂತಾದ ಕಡೆಗೆ ಹಾಯ್ದು ಸಂಪನ್ನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT