ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕಾರವಾರ ದ್ವಿತೀಯ

​ಪ್ರಜಾವಾಣಿ ವಾರ್ತೆ
Published 8 ಮೇ 2018, 13:23 IST
Last Updated 8 ಮೇ 2018, 13:23 IST
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕಾರವಾರ ದ್ವಿತೀಯ
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕಾರವಾರ ದ್ವಿತೀಯ   

ಕಾರವಾರ: ಸೋಮವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲೆಯು ಶೇ 88.12 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಕಳೆದ ಬಾರಿ ಶೇ 79.82 ಫಲಿತಾಂಶದೊಂದಿಗೆ ಐದನೇ ಸ್ಥಾನ ಪಡೆದುಕೊಂಡಿತ್ತು. ಆದರೆ, ಈ ಬಾರಿ ಮೂರು ಸ್ಥಾನಕ್ಕೆ ಜಿಗಿತ ಕಂಡಿದೆ.

ಜಿಲ್ಲೆಯಲ್ಲಿ 8,942 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 7,880 ಮಂದಿ ಉತ್ತೀರ್ಣರಾಗಿದ್ದಾರೆ. ಶೇ 91.49ರಷ್ಟು ಬಾಲಕಿಯರು ಹಾಗೂ ಶೇ 84.67ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.

ADVERTISEMENT

ಕಾರವಾರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಕಾರವಾರ ತಾಲ್ಲೂಕು ಶೇ 89.75 ಫಲಿತಾಶಂದೊಂದಿಗೆ ಪ್ರಥಮ, ಶೇ 89.27 ಫಲಿತಾಶ ಗಳಿಸಿರುವ ಹೊನ್ನಾವರ ದ್ವಿತೀಯ ಹಾಗೂ ಕುಮಟಾ ತಾಲ್ಲೂಕು ಶೇ 88.53 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ.

ಈ ಬಗ್ಗೆ ’ಪ್ರಜಾವಾಣಿ’ ಜತೆ ಮಾತನಾಡಿದ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಪಿ.ಕೆ.ಪ್ರಕಾಶ, ’ಮಧ್ಯಾಹ್ನದ ವೇಳೆಗೆ ಅಂತರ್ಜಾಲದಲ್ಲಿ ಫಲಿತಾಂಶದ ವಿವಿರಗಳು ದೊರೆತಿವೆ. ಆದರೆ, ಜಿಲ್ಲೆಯಲ್ಲಿ ಮೊದಲ ಮೂರು ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ವಿವಿರ ಮಂಗಳವಾರ ತಿಳಿದು ಬರಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.