
ಪ್ರಜಾವಾಣಿ ವಾರ್ತೆಮುಂಡಗೋಡ: ತಾಲ್ಲೂಕಿನ ಚಿಗಳ್ಳಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ನಡುವೆ ಹಾದು ಹೋಗಿರುವ ಕಾಲುವೆ ಮೇಲೆ ಗ್ರಾಮ ಪಂಚಾಯ್ತಿ ವತಿಯಿಂದ ಸಿಮೆಂಟ್ ಸ್ಲ್ಯಾಬ್ ಹಾಕಲಾಗಿದೆ. ಈ ಮೊದಲು ಇಲ್ಲಿ ತಿರುಗಾಡಲು ಮಕ್ಕಳಿಗೆ ತೊಂದರೆಯಾಗಿತ್ತು.
ಕಳೆದ ಮೂರು ವರ್ಷಗಳಿಂದ ಕಾಲುವೆ ಕಾಮಗಾರಿ ನಡೆದಿದ್ದು ಮೆಲ್ಭಾಗದಲ್ಲಿ ಸ್ಲ್ಯಾಬ್ ಹಾಕದೇ ಇರುವುದರಿಂದ ಮಕ್ಕಳು ಶೌಚಾಲಯಕ್ಕೆ ಹೋಗಲು ಹಲಗೆಯ ಮೇಲೆ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಾ ಹೋಗಬೇಕಾಗಿತ್ತು. ಈ ಬಗ್ಗೆ `ಪ್ರಜಾವಾಣಿ'ಯಲ್ಲಿ ಶುಕ್ರವಾರ ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾಮ ಪಂಚಾಯ್ತಿ ಅಧಿಕಾರಿಗಳು ತಾತ್ಕಾಲಿವಾಗಿ ಸಿಮೆಂಟ್ ಸ್ಲ್ಯಾಬ್ ಹಾಕಿದ್ದಾರೆ.
ಇದರಿಂದ ಶಿಕ್ಷಕರು ಹಲಗೆಗಳನ್ನು ಇಡುವ ದಿನನಿತ್ಯದ ಕೆಲಸದಿಂದ ಮುಕ್ತರಾಗಿದ್ದಾರೆ. ಆಮೆಗತಿಯಲ್ಲಿ ಸಾಗಿರುವ ಕಾಲುವೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.