ADVERTISEMENT

ಕೈಗಾರಿಕೆ ವಸಾಹತು ಸ್ಥಾಪನೆ: ಸಚಿವ ಕಾಗೇರಿ

​ಪ್ರಜಾವಾಣಿ ವಾರ್ತೆ
Published 3 ಮೇ 2011, 10:40 IST
Last Updated 3 ಮೇ 2011, 10:40 IST

ಕಾರವಾರ: ಅಂಕೋಲಾ, ಸಿದ್ದಾಪುರ, ಹೊನ್ನಾವರಗಳಲ್ಲಿ  ಕೈಗಾರಿಕೆ ಪ್ರದೇಶದಲ್ಲಿ ವಸಾಹತು ಸ್ಥಾಪನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು  ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

 ಕೋಡಿಬಾಗ ಉಜ್ವಲ ಲಕ್ಷ್ಮಿ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ವಿಭಾಗೀಯ ಮಟ್ಟದ ಸಮ್ಮೇಳನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಮಟಾ, ಕಾರವಾರ ಹಾಗೂ ಶಿರಸಿ ಪ್ರದೇಶಗಳಲಿ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಸೌಕರ್ಯ ಸೌಲಭ್ಯ ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶೇ 80 ರಷ್ಟು ಅರಣ್ಯ ಪ್ರದೇಶವಿದೆ. ಇಲಿಯ್ಲ ಪ್ರಾಕೃತಿಕ ಭೌಗೋಳಿಕ ಪ್ರದೇಶಕ್ಕನುಗುಣವಾಗಿ ನೈಸರ್ಗಿಕ ಹಾಗೂ ಅರಣ್ಯ ಕಿರು ಉತ್ಪನ್ನ ಆಧಾರಿತ ಹಾಗೂ ಪ್ರವಾಸೋದ್ಯಮ ಸಂಬಂಧಿತ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿರುವ ಯುವಕರಿಗೆ ಸರಕಾರದಿಂದ ಎಲ್ಲ  ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು ಜಿಲ್ಲೆಯಲ್ಲಿ 9 ಸಾವಿರ ಸಣ್ಣ ಕೈಗಾರಿಕಾ ಘಟಕಗಳಿವೆ.  ಇವುಗಳಿಂದಾಗಿ 48 ಸಾವಿರ ಜನರಿಗೆ ಉದ್ಯೋಗ ಲಭಿಸಿದೆ.  ಜಿಲ್ಲೆಯಲ್ಲಿ ಮಾನವಸಂಪನ್ಮೂಲ, ಕಚ್ಚಾ ಸಾಮಗ್ರಿಗಳ ಕೊರತೆ ಇಲ್ಲ.  ಪ್ರವಾಸೋದ್ಯಮದ ಮೂಲಕ ಆರಂಭಿಸಬಹುದಾದ ಕೈಗಾರಿಕೆಗಳ ಕುರಿತ  ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಣ್ಣ ಕೈಗಾರಿಕೆಗಳ ಸಂಘ( ಕಾಸಿಯಾ) ಅಧ್ಯಕ್ಷ ಎಸ್.ಎಸ್. ಬಿರಾದಾರ, ನಗರಸಭೆ ಅಧ್ಯಕ್ಷ ಗಣಪತಿ ಉಳವೇಕರ, ಜಿಲಾಧ್ಲಿಕಾರಿ ಬಿ.ಎನ್. ಕೃಷ್ಣಯ್ಯ ಜಿ.ಪಂ. ಸಿಇಓ ವಿಜಯಮೋಹನರಾಜ್ , ಕಾಸಿಯಾ ಉಪಾಧ್ಯಕ್ಷ  ಪ್ರಕಾಶ ರಾಯ್ಕರ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.