ಕಾರವಾರ: ಜಿಲ್ಲೆಯಾದ್ಯಂತ ಶನಿವಾರ ಜಿಟಿಜಿಟಿ ಮಳೆ ಮುಂದುವರಿದಿತ್ತು. ಆದರೆ, ಕರಾವಳಿಯ ಕೆಲವೆಡೆ ಮಳೆ ಕ್ಷೀಣಗೊಂಡಿತ್ತು.
ಕರಾವಳಿಯ ಅಂಕೋಲಾ ಮತ್ತು ಕಾರವಾರದಲ್ಲಿ ಉತ್ತಮ ಮಳೆಯಾದರೆ, ಭಟ್ಕಳ, ಹೊನ್ನಾವರ ಮತ್ತು ಕುಮಟಾದಲ್ಲಿ ಮಳೆ ಕ್ಷೀಣಿಸಿತ್ತು.
ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡಿನ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.