ADVERTISEMENT

`ಜಿಲ್ಲೆಯ ಅಭಿವೃದ್ಧಿಗೆ ಹೆೆಚ್ಚಿನ ಅನುದಾನ'

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 9:20 IST
Last Updated 19 ಡಿಸೆಂಬರ್ 2012, 9:20 IST

ಕುಮಟಾ: `ಅಭಿವೃದ್ಧಿಗಾಗಿ ಬೇರೆ ಬೇರೆ ಇಲಾಖೆಗಳಿಗೆ ನೂರು ಕೋಟಿಗೂ ಹೆಚ್ಚು ಅನುದಾನ ನೀಡಲಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರು ಜಿಲ್ಲೆಗೆ ನೂರು ಕೋಟಿ ಅನುದಾನ ನೀಡುತ್ತೇನೆ ಎಂದು ಹೇಳಿರುವ ವಿಷಯ ಪ್ರಸ್ತಾಪ ಮಾಡುವುದು ಬೇಡ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ತಾಲ್ಲೂಕಿನ ಮೂರೂರಿನಲ್ಲಿ ಮಂಗಳವಾರ ನಡೆದ ಮೂರುರು ಉತ್ಸವ ಹಾಗೂ ಪದವಿಪೂರ್ವ ಕಾಲೇಜಿಗೆ ಶಿಲ್ಯಾನ್ಯಾಸ ನೆರವೇರಿಸಿ ಮಾತನಾಡಿದ  ಅವರು, ಉತ್ತರ ಕನ್ನಡ ಜಿಲ್ಲೆಯ ಮೇಲೆ ನನಗೆ ವಿಶೇಷ ಅಭಿಮಾನವಿದ್ದು, ಫೆಬ್ರುವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.

`ಅಭಿವೃದ್ಧಿಗಾಗಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಲಾಗುವುದು' ಎಂದರು.ಮೂರೂರಿನ ಇತಿಹಾಸದ ಬಗ್ಗೆ ಕೇಳಿದ್ದೇನೆ. ಇದು ಪುಟ್ಟ ಊರಾಗಿದ್ದರು ಯಕ್ಷಗಾನ ಕಲಾವಿದರು, ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದು ಸಂತಸದ ವಿಷಯ ಎಂದರು.

ಫೆಬ್ರುವರಿಯಲ್ಲಿ ಬಜೆಟ್: ಸಿ.ಎಂ
ಕುಮಟಾ:
`ಫೆಬ್ರುವರಿಯಲ್ಲಿ ಬಜೆಟ್ ಮಂಡಿಸಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ತಾಲ್ಲೂಕಿನ ಮೂರೂರಿನಲ್ಲಿ ಮಂಗಳವಾರ ನಡೆದ ಮೂರೂರು ಉತ್ಸವ ಹಾಗೂ ಪದವಿಪೂರ್ವ ಕಾಲೇಜಿಗೆ ಶಿಲ್ಯಾನ್ಯಾಸ ನೆರವೇರಿಸಿದ ಅವರು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸರ್ಕಾರ ಬಜೆಟ್ ಮಂಡಿಸುವುದು ಅನುಮಾನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ' ಅದು ಅವರಿಗೆ ಬಿಟ್ಟ ವಿಷಯ' ಎಂದು ಚುಟುಕಾಗಿ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.