ADVERTISEMENT

ನಿರಾಶ್ರಿತ ಕನ್ನಡಿಗರ ಶಾಶ್ವತ ಪುನರ್ವಸತಿ: ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 7:06 IST
Last Updated 4 ಅಕ್ಟೋಬರ್ 2017, 7:06 IST
ಗೋವಾ ಬೈನಾ ಕಡಲತೀರಕ್ಕೆ ಮಂಗಳವಾರ ಭೇಟಿ ನೀಡಿದ್ದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಅಲ್ಲಿನ ಕನ್ನಡಿಗರ ಸಮಸ್ಯೆ ಆಲಿಸಿದರು
ಗೋವಾ ಬೈನಾ ಕಡಲತೀರಕ್ಕೆ ಮಂಗಳವಾರ ಭೇಟಿ ನೀಡಿದ್ದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಅಲ್ಲಿನ ಕನ್ನಡಿಗರ ಸಮಸ್ಯೆ ಆಲಿಸಿದರು   

ಕಾರವಾರ(ಉತ್ತರ ಕನ್ನಡ): ‘ಗೋವಾದ ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಗೋವಾದ ಬೈನಾ ಕಡಲತೀರಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಅಲ್ಲಿನ ನಿರಾಶ್ರಿತರ ಕನ್ನಡಿ ಗರ ಸಮಸ್ಯೆಯನ್ನು ಆಲಿಸಿದರು.

‘40 ವರ್ಷಗಳಿಂದ ವಾಸವಾಗಿದ್ದ ಕನ್ನಡಿಗರನ್ನು ಒಕ್ಕಲೆಬ್ಬಿಸಿ, ನಿರಾಶ್ರಿತರನ್ನಾಗಿ ಮಾಡುವ ಮೂಲಕ ಗೋವಾ ಸರ್ಕಾರದ ಅಮಾನವೀಯವಾಗಿ ನಡೆದುಕೊಂಡಿದೆ. ಯಾವುದೇ ನೋಟಿಸ್‌ ನೀಡದೇ ಮನೆಗಳನ್ನು ಹಾಗೂ ಇಲ್ಲಿನ ಬಸವ ಗುಡಿಯನ್ನು ಧ್ವಂಸಗೊಳಿಸಿರುವುದು ಖಂಡನೀಯ’ ಎಂದು ಕಿಡಿಕಾರಿದರು.

ಭೂಮಿ ನೀಡಲಿ: ‘ಇದೇ ಬೈನಾ ಕಡಲತೀರದಲ್ಲಿ 2014ರಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮಗೊಳಿಸಿದ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನಿರಾಶ್ರಿತರಿಗೆ ಭೂಮಿ ಒದಗಿಸುವುದಾಗಿ ಭರವಸೆ ನೀಡಿದ್ದರು. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಹಾಗೂ ಆ ಜಾಗದಲ್ಲಿ ಕರ್ನಾಟಕ ಸರ್ಕಾರ ಮನೆ ನಿರ್ಮಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸುವಂತೆ ಕರ್ನಾಟಕ ಸರ್ಕಾರ ಒತ್ತಡ ಹೇರಬೇಕು. ಇಲ್ಲವಾದರೆ ಸರ್ಕಾರವೇ ಮಾನವೀಯ ಆಧಾರದ ಮೇಲೆ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.