ADVERTISEMENT

ಪರಿಪೂರ್ಣ ಸಾಧನೆ: ಪ್ರಮುಖರಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 7:00 IST
Last Updated 6 ಸೆಪ್ಟೆಂಬರ್ 2013, 7:00 IST

ಶಿರಸಿ: ಉತ್ತಮ ಶಿಕ್ಷಕರಿಗೆ ಸನ್ಮಾನ, ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ರ ಸಾಧನೆ ಮಾಡಿದ ಶಾಲೆಯ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇಲ್ಲಿನ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿರಸಿ ತಾಲ್ಲೂಕಿನ ಗುಡ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಧಾ ನಾಗೇಶ ನಾಯ್ಕ, ಸಿದ್ದಾಪುರ ತಾಲ್ಲೂಕಿನ ಹೂಡ್ಲಮನೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿ.ಟಿ.ಹೆಗಡೆ, ಯಲ್ಲಾಪುರ ತಾಲ್ಲೂಕಿನ ಚಿನ್ನಾಪುರ ಸ.ಹಿ.ಪ್ರಾ. ಶಾಲೆಯ ಸಹ ಶಿಕ್ಷಕಿ ಸುಚೇತಾ ಮಿರಾಶಿ, ಮುಂಡಗೋಡದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಡಿ.ಎಸ್.ಪಟಗಾರ, ಹಳಿಯಾಳ ತಾಲ್ಲೂಕಿನ ಪ್ರದಾನಟ್ಟಿ ಸ.ಕಿ.ಪ್ರಾ. ಶಾಲೆಯ ಸಹ ಶಿಕ್ಷಕ ವಿ.ಪಿ.ಕೊರ್ರೆಕರ, ಜೊಯಿಡಾ ಸ.ಹಿ.ಪ್ರಾ. ಶಾಲೆಯ ಸಹ ಶಿಕ್ಷಕ ಮಹಾದೇವ ಹಳದನಕರ, ಶಿರಸಿ ತಾಲ್ಲೂಕಿನ ಕುಳವೆ ಬರೂರು ಜನತಾ ವಿದ್ಯಾಲಯದ ಸಹ ಶಿಕ್ಷಕ ವಿನೋದ ಹೆಗಡೆ, ಯಲ್ಲಾಪುರ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲೆ ಶಿಕ್ಷಕ ಸತೀಶ ಹೆಗಡೆ, ಮುಂಡಗೋಡ ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲೆ ಶಿಕ್ಷಕ ಮಹಾಂತೇಶ ಹುಬ್ಬಳ್ಳಿ, ಹಳಿಯಾಳ ಚಿಬ್ಬಲಕೇರಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ವೆಂಕಟೇಶ ನಾಗಪ್ಪ ನಾಯಕ, ಜೊಯಿಡಾ ಉಳವಿ ಚೆನ್ನಬಸವೇಶ್ವರ ಪ್ರೌಢಶಾಲೆಯ ಸಹ ಶಿಕ್ಷಕ ಗಂಗಾಧರ ಚನ್ನಪ್ಪ ಬೂದಿಹಾಳ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, `ವೃತ್ತಿ ಕೇಂದ್ರಿತ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆಗೆ ಮಾತ್ರ ಸೀಮಿತಗೊಳಿಸಬೇಕಾದ ಅಗತ್ಯವಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಇನ್ನಷ್ಟು ಹೆಚ್ಚು ತೊಡಗಿಕೊಳ್ಳಲು ಅನುಕೂಲವಾಗುತ್ತದೆ' ಎಂದರು.
ನಿವೃತ್ತ ಪ್ರಾಚಾರ್ಯ ಎಸ್.ಐ.ಭಟ್ಟ ವಿಶೇಷ ಉಪನ್ಯಾಸ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಗುರುಪಾದ ಹೆಗಡೆ, ಸದಸ್ಯೆ ಶೈಲಜಾ ನಾಯ್ಕ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಆರ್.ಡಿ.ಹೆಗಡೆ, ಶೋಭಾ ನಾಯ್ಕ, ಚಂದ್ರಪ್ಪ ಚೆನ್ನಯ್ಯ, ಉಷಾ ಹೆಗಡೆ, ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಎಂ.ಎಸ್.ಪ್ರಸನ್ನಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಸಾಮಾಜಿಕ ಕಾರ್ಯಕರ್ತ ಭೀಮಣ್ಣ ನಾಯ್ಕ, ಮಾರಿಕಾಂಬಾ ದೇವಾಲಯದ ಅಧ್ಯಕ್ಷ ಆರ್.ಎಂ.ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.