ADVERTISEMENT

ಮುಂದಿನ ಸಮ್ಮೇಳನದ ಆತಿಥ್ಯ ಬನವಾಸಿಗೆ ನೀಡಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 7:23 IST
Last Updated 26 ನವೆಂಬರ್ 2017, 7:23 IST
84ನೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿಗೆ ನೀಡಬೇಕೆಂದು ಕಸಾಪ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಮೈಸೂರಿನಲ್ಲಿ ಒತ್ತಾಯಿಸಿದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಇದ್ದಾರೆ.
84ನೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿಗೆ ನೀಡಬೇಕೆಂದು ಕಸಾಪ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಮೈಸೂರಿನಲ್ಲಿ ಒತ್ತಾಯಿಸಿದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಇದ್ದಾರೆ.   

ಕಾರವಾರ: ಮುಂದಿನ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಆದಿಕವಿ ಪಂಪನ ನಾಡು ಉತ್ತರ ಕನ್ನಡ ಜಿಲ್ಲೆಯ ಬನವಾಸಿಗೆ ನೀಡಬೇಕು ಎಂದು ಕಸಾಪ ಜಿಲ್ಲಾ ಘಟಕವು ಶುಕ್ರವಾರ ಮೈಸೂರಿನಲ್ಲಿ ಆಗ್ರಹಿಸಿತು.

‘ಕಳೆದ ವರ್ಷ ರಾಯಚೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಬನವಾಸಿಯಲ್ಲಿ ಸಮ್ಮೇಳನ ನಡೆಸಲು ಅವಕಾಶ ಕೊಡುವಂತೆ ಕೋರಲಾಗಿತ್ತು. ಆದರೆ ಅವಕಾಶ ಲಭ್ಯವಾಗಿರಲಿಲ್ಲ. ಈ ಸಲವಾದರೂ ಆತಿಥ್ಯ ವಹಿಸಿಕೊಳ್ಳಲು ಅವಕಾಶ ಮಾಡಿಕೊಬೇಕು ಎಂದರು.

ಕೇಂದ್ರ ಕಸಾಪ ಕಾರ್ಯಕಾರಿ ಸಮಿತಿಯು ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಒತ್ತಾಯಿಸಿದರು.

ADVERTISEMENT

ಜಿಲ್ಲಾ ಕಸಾಪ ಕೋಶಾಧ್ಯಕ್ಷ ಉಮೇಶ ಮುಂಡಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ ಯಲ್ಲಾಪುರ, ನಾಗರಾಜ ಹರಪನಹಳ್ಳಿ, ಉಪೇಂದ್ರ ಘೋರ್ಪಡೆ ಹಳಿಯಾಳ, ನಾಗೇಶ ಪಾಲನಕರ ಮುಂಡಗೋಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.