ಕಾರವಾರ: ಕರ್ನಾಟಕ ವಿದ್ಯುತ್ ನಿಗಮದ ನೌಕರರು ತಾಲ್ಲೂಕಿನ ಕದ್ರಾದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಹಮ್ಮಿಕೊಂಡ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಕೆಪಿಸಿ ನೌಕರರ ಸಂಘದ ಕಾರ್ಯದರ್ಶಿ ಮಹೇಶ ಕುಡ್ತಲಕರ್‌ಮಾತನಾಡಿ, `ರಿಮೂಟ್ ಏರಿಯಾ ಭತ್ಯೆ ಮಿತಿ ಹೆಚ್ಚಳ, ತುಟ್ಟಿಭತ್ಯೆ ವಿಲೀನ, ಒಪ್ಪಂದದ ಅವಧಿಯನ್ನು ಏಳು ವರ್ಷದಿಂದ ಐದು ವರ್ಷಕ್ಕೆ ಇಳಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳು ಆಡಳಿತ ಮಂಡಳಿ ಮುಂದಿಟ್ಟಿದ್ದು ಈ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯುತ್ತದೆ~ ಎಂದರು.
`ಬೇಡಿಕೆ ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಜೂನ್ 21ರಂದು ಇಂಧನ ಸಚಿವರು ಮಾತುಕತೆ ಆಹ್ವಾನಿಸಿದ್ದಾರೆ. ಈ ಸಭೆಯಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷರು ಈಗಾಗಲೇ ಸರ್ಕಾರಕ್ಕೆ, ಕೆಪಿಸಿ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ~ ಎಂದರು.
ಕದ್ರಾ ಕೆಪಿಸಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ, ಸಿದ್ದಪ, ಕಾಡಪ್ಪ ಗೌಡ, ಅಶೋಕ ಪವಾರ, ನಾಗರಾಜ ಶೆಟ್ಟಿ, ರವಿಕಾಂತ ವೈದ್ಯ, ರಾಜು ಸಣ್ಣೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.