ADVERTISEMENT

ಸೇವಾ ಮನೋಭಾವಕ್ಕೆ ಎನ್ನೆಸ್ಸೆಸ್ ಪೂರಕ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 9:05 IST
Last Updated 13 ಅಕ್ಟೋಬರ್ 2011, 9:05 IST

ಸಿದ್ದಾಪುರ:  ಎನ್ನೆಸ್ಸೆಸ್ ಶಿಬಿರಗಳಲ್ಲಿ ಸೇವಾ ಮನೋಭಾವದ ಬಗ್ಗೆ ವಿದ್ಯಾರ್ಥಿ ಗಳು ಅರಿತುಕೊಳ್ಳಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೆ.ಜಿ. ನಾಯ್ಕ ನುಡಿದರು.

ತಾಲ್ಲೂಕಿನ ಹಣಜಿಬೈಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆ ಯುತ್ತಿರುವ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರ ವನ್ನು ಬುಧವಾರ ಉದ್ಘಾಟಿಸಿ ಅವರು ಮಾತ ನಾಡಿದರು.

ಎನ್ನೆಸ್ಸೆಸ್ ಶಿಬಿರಗಳಲ್ಲಿ ವಿದ್ಯಾರ್ಥಿ ಗಳು ಜೀವನಕ್ಕೆ ಬೇಕಾದು ದನ್ನು ಕಲಿಯಲು ಸಾಧ್ಯವಾಗುತ್ತದೆ. ಎನ್‌ಎಸ್‌ಎಸ್ ಆಶ್ರಯದಲ್ಲಿ ನಡೆಯುವ ಸೇವಾ ಚಟುವಟಿಕೆಗಳಲ್ಲಿ ಸ್ಥಳೀಯರು ಕೂಡ ಭಾಗಿಯಾಗಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಗಳಾಗಿ ಹಣಜಿಬೈಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಡಿ.ಬಿ. ಮಡಿವಾಳ, ಶಾಲೆಯ ಮುಖ್ಯೋಪಾಧ್ಯಾಯ ಆರ್.ಎನ್‌ಹಳಕಾರ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ ಕಾರಿಗಳಾದ ಎಂ.ಕೆ.ನಾಯ್ಕ ಹಾಗೂ ಇತರರು, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರವೀಂದ್ರ ಭಟ್ ಬಳಗುಳಿ ಉಪಸ್ಥಿ ತರಿದ್ದರು. ಕಾಲೇಜಿನ ಪ್ರಾಚಾರ್ಯ ಕೆ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಪ.ಪಂ.ಅಧ್ಯಕ್ಷ ಕೆ.ಜಿ.ನಾಯ್ಕ ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿ ದರು.ಸುಮಿತ್ರಾ ಶೇಟ್ ಮತ್ತು ರೇಷ್ಮಾ ಶೇಟ್ ಪ್ರಾರ್ಥನೆ ಹಾಡಿದರು. ಎನ್‌ಎಸ್ ಎಸ್ ಕಾರ್ಯ ಕ್ರಮಾಧಿಕಾರಿ ಜಿ.ಎಸ್.ಹೆಗಡೆ ಸ್ವಾಗ ತಿಸಿದರು. ಉಪನ್ಯಾಸಕ ಜಿ.ಬಂಗಾರಪ್ಪ ವಂದಿಸಿದರು. ಬೆನಿಸ್ ಫರ್ನಾಂಡೀಸ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.