ADVERTISEMENT

‘ಸ್ವಚ್ಛವಾಗಿದ್ದರೆ ಉತ್ತಮ ಆರೋಗ್ಯ’

​ಪ್ರಜಾವಾಣಿ ವಾರ್ತೆ
Published 15 ಜೂನ್ 2018, 12:49 IST
Last Updated 15 ಜೂನ್ 2018, 12:49 IST

ಯಲ್ಲಾಪುರ: ‘ಇಲಾಖೆಯೊಂದಿಗೆ ಸಾರ್ವಜನಿಕರೂ ಸ್ವಚ್ಛತೆಯ ಕುರಿತು ಕಾಳಜಿ ವಹಿಸಿದರೆ ಪರಿಸರ ನೈರ್ಮಲ್ಯದ ಜೊತೆ ರೋಗ-ರುಜಿನಗಳ ಪ್ರಮಾಣವನ್ನು ತಗ್ಗಿಸಬಹುದು’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ ಹೇಳಿದರು.

ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ಅಡ್ವೊಕೆಸಿ ಕಾರ್ಯಾಗಾರವ ಉದ್ಘಾಟಿಸಿ ಅವರು ಮಾತನಾಡಿದರು.

‘ಸುಶಿಕ್ಷಿತರಾದವರೂ ನೈರ್ಮಲ್ಯ ಸಂರಕ್ಷಣೆಯ ವಿಚಾರದಲ್ಲಿ ನಿರ್ಲಕ್ಷ್ಯ ತೋರುವುದು ಸರಿಯಲ್ಲ’ ಎಂದರು.

ADVERTISEMENT

ಡಾ.ಸೌಮ್ಯಾ.ಕೆ.ವಿ ಉಪನ್ಯಾಸ ನೀಡಿ, ‘ಡೆಂಗಿ ಮತ್ತು ಮಲೇರಿಯಾ ರೋಗಗಳು ವೈರಸ್‌ಗಳಿಂದ ಉಂಟಾಗುವ ಸೋಂಕು ಹೊಂದಿ ಈಡೀಸ್ ಮತ್ತು ಅನಾಫಿಲಿಸ್ ಸೊಳ್ಳೆಗಳು ಸೃಷ್ಟಿಯಾಗುತ್ತವೆ. ಸಾರ್ವ ಜನಿಕ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ತಹಶೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಇ.ಒ ವಿಠ್ಠಲ ನಾಟೇಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ತಿನೇಕರ್, ಬಿಇಒ ಎನ್. ಆರ್. ಹೆಗಡೆ ಇದ್ದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಮಾತನಾಡಿದರು. ಆರೋಗ್ಯ ಶಿಕ್ಷಣಾಧಿ ಕಾರಿ ಎಸ್. ಟಿ. ಭಟ್ಟ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.