ADVERTISEMENT

‘ಕನ್ನಡ ಬೋಧನೆಗೆ ಪ್ರಯೋಗ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2013, 9:17 IST
Last Updated 7 ಡಿಸೆಂಬರ್ 2013, 9:17 IST

ಕಾರವಾರ: ಜಿಲ್ಲೆಯ ಗಡಿಭಾಗದಲ್ಲಿ ಕನ್ನಡ ವಿಷಯದಲ್ಲಿ ಉತ್ತಮ ಫಲಿತಾಂಶ ಕಂಡುಕೊಳ್ಳಬೇಕಾದರೆ ಬೋಧನೆಯಲ್ಲಿ ನೂತನ ಪ್ರಯೋಗಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣಸಿದ್ದಪ್ಪ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ವಿಷಯ ಬೋಧಕ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ವಿಷಯ ಬೋಧನೆಯಲ್ಲಿ ಹೊಸ ಹೊಸ ವಿಧಾನಗಳನ್ನು ಅನುಸರಿಸುವ ಮೂಲಕ ವಿದ್ಯಾರ್ಥಿಗಳನ್ನು ವಿಷಯದ ಕಡೆಗೆ ಸೆಳೆಯಬೇಕು. ಅಂದಾಗ ಮಾತ್ರ ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಸಕ್ತಿ ಮೂಡಲು ಸಾಧ್ಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಾಂತ ಹೆಗಡೆ ಮಾತನಾಡಿದರು. ವಿಷಯ ಪರಿವೀಕ್ಷಕ ಉಮೇಶ ನಾಯ್ಕ, ಮುಖ್ಯಾಧ್ಯಾಪಕಿ ಭಾರತಿ ಪಾವುಸ್ಕರ್, ಶಿಕ್ಷಣ ತಜ್ಞ ವೆಂಕಟೇಶ ಮೂರ್ತಿ, ಸೆಂಟ್ ಥೋಮಸ್ ಪ್ರೌಢ ಶಾಲೆ ಕನ್ನಡ ಶಿಕ್ಷಕ ಬಿ.ಎಂ. ಭಟ್ಟ, ಸೆಕೆಂಡರಿ ಸ್ಕೂಲ್ ಮುಖ್ಯಾಧ್ಯಾಪಕ ಪಿ.ಎಸ್.ರಾಣೆ, ಕನ್ನಡ ಭಾಷಾ ಸಂಘದ ಸಹ ಸಂಚಾಲಕ ಗಣೇಶ ಭಿಷ್ಠಣ್ಣನವರ್ ಮತ್ತಿತರರು ಹಾಜರಿದ್ದರು.
ವಿದ್ಯಾರ್ಥಿ ಓಂಕಾರ ಪಾವಸ್ಕರ್ ಪ್ರಾಥಿಸಿದರು. ವೆಂಕಟರಮಣ ನಾಯಕ ಸ್ವಾಗತಿಸಿ, ವಂದಿಸಿದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.