ADVERTISEMENT

‘ಸಮ್ಮೇಳನದಿಂದ ಸಮಾಜದ ಅಭಿವೃದ್ಧಿ ಸಾಧ್ಯ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 6:09 IST
Last Updated 8 ಮಾರ್ಚ್ 2014, 6:09 IST

ಭಟ್ಕಳ: ‘ಸಮ್ಮೇಳನಗಳಿಂದ ಸಮಾಜ ದಲ್ಲಿ ಅಂತರ ಕಡಿಮೆಯಾಗಿ ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸಿ, ಸಮಾಜದ ಅಭಿವೃದ್ಧಿಗೆ ಸಹಾಯವಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಜಿಲ್ಲಾ ಉಪನಿರ್ದೇಶಕ ಜಿ.ಎಸ್ ನಾಯ್ಕ ಹೇಳಿದರು.

ಪಟ್ಟಣದ ನ್ಯೂ ಇಂಗ್ಲಿಷ್‌ ಸ್ಕೂಲ್‌ ಸಭಾಭವನದಲ್ಲಿ ನಡೆದ ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿ ಡಾ.ವಿ.ಆರ್‌ ನಾಯ್ಕ, ‘ಸಮಾಜ ಬಾಂಧವರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ, ಸೂಕ್ತ ಸಲಹೆ ಮಾರ್ಗದರ್ಶನ ನೀಡಬೇಕು’ ಎಂದರು. ಸಂಘದ ತಾಲ್ಲೂಕು ಅಧ್ಯಕ್ಷ ಶಾಂತಾರಾಮ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿರಸಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್‌.ಆರ್‌. ನಾಯ್ಕ,  ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ ಜಿಲ್ಲಾ ಉಪನಿರ್ದೇಶಕ ಈಶ್ವರ ಎಚ್‌. ನಾಯ್ಕ, ಡಾ.ಪ್ರಕಾಶ ನಾಯ್ಕ, ಜಿಲ್ಲಾ ಸಂಘದ ಅಧ್ಯಕ್ಷ  ಡಾ.ನಾಗೇಶ ಎಚ್‌ ನಾಯ್ಕ, ಉಪನ್ಯಾಸಕಿ ರೇಖಾ ನಾಯ್ಕ, ಎಸ್‌ಬಿಎಂ ಶಾಖೆ ವ್ಯವಸ್ಥಾಪಕ ಶೈಲೇಶ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ, ನಿವೃತ್ತರಿಗೆ ಸನ್ಮಾನ ಹಾಗೂ ಹೊಸದಾಗಿ ನೌಕರಿಗೆ ಸೇರ್ಪಡೆಯಾದವರಿಗೆ ಶುಭ ಕೋರಲಾಯಿತು. ಸಿ.ಆರ್‌ ನಾಯ್ಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ ವರದಿ ಓದಿದರು. ಪರಮೇಶ್ವರ ನಾಯ್ಕ ಹಾಗೂ ಗಂಗಾಧರ ನಾಯ್ಕ ನಿರೂಪಿಸಿದರು. ಮಂಜುನಾಥ ನಾಯ್ಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.