ಸೂಪಾ ಜಲಾಶಯ
ಕಾರವಾರ: ಜೊಯಿಡಾ ತಾಲ್ಲೂಕಿನ ಗಣೇಶಗುಡಿಯ ಸೂಪಾ ಜಲಾಶಯ ಭರ್ತಿ ಹಂತಕ್ಕೆ ಸಮೀಪಿಸಿದ ಹಿನ್ನೆಲೆಯಲ್ಲಿ ಮಂಗಳವಾರ 10 ಸಾವಿರ ಕ್ಯುಸೆಕ್ ನೀರು ಕಾಳಿ ನದಿಗೆ ಹರಿಸಲಾಯಿತು.
564 ಮೀ. ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ 559.75 ಮೀ ವರೆಗೆ ನೀರು ಸಂಗ್ರಹವಾಗಿದೆ. ಮಂಗಳವಾರ ಬೆಳಿಗ್ಗೆ ವೇಳೆಗೆ ನದಿಗೆ ಒಳಹರಿವಿನ ಪ್ರಮಾಣ 22,144 ಕ್ಯುಸೆಕ್ ಇತ್ತು. ಜಲಾನಯನ ಪ್ರದೇಶದಲ್ಲಿ ಆಗಾಗ ಮಳೆ ಸುರಿಯುತ್ತಿದ್ದು, ಒಳಹರಿವು ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ನೀರು ಹರಿಸಲಾಗಿದೆ ಎಂದು ಕೆ.ಪಿ.ಸಿ ಅಧಿಕಾರಿಗಳು ತಿಳಿಸಿದ್ದಾರೆ.
2021ರಲ್ಲಿ ಕೊನೆಯ ಬಾರಿಗೆ ಸೂಪಾ ಜಲಾಶಯದಿಂದ ನೀರು ಹೊರಬಿಡಲಾಗಿತ್ತು. ಕಳೆದ ವರ್ಷ ಮಳೆಯ ಕೊರತೆಯಿಂದ ಜಲಾಶಯದಲ್ಲಿ ನೀರು ಸಂಗ್ರಹಣೆ ಕಡಿಮೆ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.