ADVERTISEMENT

ಜಿಲ್ಲೆಯಲ್ಲಿ 201 ಮಂದಿಗೆ ಆಶ್ರಯ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 13:27 IST
Last Updated 31 ಮಾರ್ಚ್ 2020, 13:27 IST
‌ಹೊನ್ನಾವರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಆಶ್ರಯ ಪಡೆದ ಮಹಿಳೆಯರು
‌ಹೊನ್ನಾವರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಆಶ್ರಯ ಪಡೆದ ಮಹಿಳೆಯರು   

ಕಾರವಾರ: ಕೊರೋನಾ ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಬಳಿಕ, ಜಿಲ್ಲೆಯಲ್ಲಿ ಸರ್ಕಾರದ 16 ಆಶ್ರಯತಾಣಗಳಲ್ಲಿ 201ಮಂದಿಆಶ್ರಯ ಪಡೆದುಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಎರಡು ಹಾಸ್ಟೆಲ್‌ಗಳಲ್ಲಿ 105, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಮೂರು ಹಾಸ್ಟೆಲ್‌ಗಳಲ್ಲಿ 51, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಒದಗಿಸಿದ 11 ಆಶ್ರಯತಾಣಗಳಲ್ಲಿ 45 ಮಂದಿ ಆಶ್ರಯ ಪಡೆದಿದ್ದಾರೆ. ಬಹುತೇಕ ಅಸಂಘಟಿತ ವಲಯದ ವಲಸೆ ಕಾರ್ಮಿಕರು, ನಿರಾಶ್ರಿತರು ಇವುಗಳಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT