ADVERTISEMENT

ಕುಮಟಾದಲ್ಲಿ 3 ಸೆಂ.ಮೀ. ಮಳೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 20:29 IST
Last Updated 2 ಸೆಪ್ಟೆಂಬರ್ 2018, 20:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ.

ಕುಮಟಾ, ಬೆಳ್ಳೂರಿನಲ್ಲಿ 3, ಕ್ಯಾಸಲ್‌ರಾಕ್‌ 2, ಕಾರ್ಕಳ, ಹೊನ್ನಾವರ, ಅಂಕೋಲ, ‌ಗದಗ, ತಾಳಿಕೋಟೆ, ದೇವರ ಹಿಪ್ಪರಗಿ, ದೇವದುರ್ಗದಲ್ಲಿ ತಲಾ ಒಂದು ಸೆಂ.ಮೀ. ಮಳೆ ಸುರಿದಿದೆ.

ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.